Psalms · chapter 75 · verse 3
Psalm 75:3 in Kannada
ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
Bhoomiyoo adara nivaasigalellaroo karagiddaare; naanu adara sthambhagalannu nillisuttene selaa.
Psalm 75:3 in English
- King James Version (KJV)
- The earth and all the inhabitants thereof are dissolved: I bear up the pillars of it. Selah.
- World English Bible (WEB)
- The earth and all its inhabitants quake. I firmly hold its pillars. Selah.
- American Standard Version (ASV)
- The earth and all the inhabitants thereof are dissolved: I have set up the pillars of it. [Selah
- Bible in Basic English (BBE)
- When the earth and all its people become feeble, I am the support of its pillars. (Selah.)
- Darby Translation (DBY)
- The earth and all the inhabitants thereof are dissolved: I have established its pillars. Selah.
- Webster's Bible (WBS)
- The earth and all its inhabitants are dissolved: I bear up the pillars of it. Selah.
- Young's Literal Translation (YLT)
- Melted is the earth and all its inhabitants, I — I have pondered its pillars. Selah.
Read in context
- 1ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
- 2ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
- 3ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
- 4ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
- 5ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
Cross references
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Isaiah 24:19 ಯೆಶಾಯ 24:19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Isaiah 49:8 ಯೆಶಾಯ 49:8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- Isaiah 24:1–12 ಯೆಶಾಯ 24:1–12ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- Psalm 78:60–72 ಕೀರ್ತನೆಗಳು 78:60–72ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ. ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು. ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
- 1 Samuel 25:28 1 ಸಮುವೇಲನು 25:28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
- 1 Samuel 18:7 1 ಸಮುವೇಲನು 18:7ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
- 1 Samuel 31:1–7 1 ಸಮುವೇಲನು 31:1–7ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು. ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು. ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು. ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು. ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- Psalm 60:1–3 ಕೀರ್ತನೆಗಳು 60:1–3ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ. ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ. ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.