Psalms · chapter 75 · verse 7
Psalm 75:7 in Kannada
ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
Aadare devaru nyaayateerisuvaa tanaagiddaane; obbanannu taggisuttaane; innobbanannu ettuttaane.
Psalm 75:7 in English
- King James Version (KJV)
- But God [is] the judge: he putteth down one, and setteth up another.
- World English Bible (WEB)
- But God is the judge. He puts down one, and lifts up another.
- American Standard Version (ASV)
- But God is the judge: He putteth down one, and lifteth up another.
- Bible in Basic English (BBE)
- But God is the judge, putting down one, and lifting up another.
- Darby Translation (DBY)
- For God is the judge; he putteth down one and exalteth another.
- Webster's Bible (WBS)
- But God [is] the judge: he putteth down one, and setteth up another.
- Young's Literal Translation (YLT)
- But God [is] judge, This He maketh low — and this He lifteth up.
Read in context
- 5ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
- 6ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
- 7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- 8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- 9ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
Cross references
- Luke 1:52 ಲೂಕನು 1:52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- Daniel 2:21–22 ದಾನಿಯೇಲನು 2:21–22ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ. ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Psalm 147:6 ಕೀರ್ತನೆಗಳು 147:6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
- 2 Samuel 6:21 2 ಸಮುವೇಲನು 6:21ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Jeremiah 27:4–8 ಯೆರೆಮೀಯ 27:4–8ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು-- ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 1 Samuel 15:28 1 ಸಮುವೇಲನು 15:28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- Psalm 58:11 ಕೀರ್ತನೆಗಳು 58:11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.