Psalms · chapter 76 · verse 1
Psalm 76:1 in Kannada
ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
Devaru yehoodadalli prasiddhavaagiddaane; israayelinalli aatana hesaru doddadaagide.
Psalm 76:1 in English
- King James Version (KJV)
- To the chief Musician on Neginoth, A Psalm [or] Song of Asaph. In Judah [is] God known: his name [is] great in Israel.
- World English Bible (WEB)
- For the Chief Musician. On stringed instruments. A Psalm by Asaph. A song. In Judah, God is known. His name is great in Israel.
- American Standard Version (ASV)
- For the Chief Musician; on stringed instruments. A Psalm of Asaph, a Song. In Judah is God known: His name is great in Israel.
- Bible in Basic English (BBE)
- To the chief music-maker; put to Neginoth. A Psalm. Of Asaph. A Song. In Judah is the knowledge of God; his name is great in Israel,
- Darby Translation (DBY)
- To the chief Musician. On stringed instruments. A Psalm of Asaph: a Song. In Judah is God known, his name is great in Israel;
- Webster's Bible (WBS)
- To the chief Musician on Neginoth, A Psalm [or] Song of Asaph. In Judah [is] God known: his name [is] great in Israel.
- Young's Literal Translation (YLT)
- To the Overseer with stringed instruments. — A Psalm of Asaph. — A Song. In Judah [is] God known, in Israel His name [is] great.
Read in context
- 1ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
- 2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- 3ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
Cross references
- Acts 17:23 ಅಪೊಸ್ತಲರ ಕೃತ್ಯಗಳು 17:23ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
- Daniel 4:1–2 ದಾನಿಯೇಲನು 4:1–2ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ. ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
- Daniel 3:29 ದಾನಿಯೇಲನು 3:29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
- 1 Chronicles 29:10–12 1 ಪೂರ್ವಕಾಲವೃತ್ತಾಂತ 29:10–12ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- Psalm 4:1 ಕೀರ್ತನೆಗಳು 4:1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- Psalm 98:2–3 ಕೀರ್ತನೆಗಳು 98:2–3ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- Deuteronomy 4:7–8 ಧರ್ಮೋಪದೇಶಕಾಂಡ 4:7–8ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Psalm 48:1–3 ಕೀರ್ತನೆಗಳು 48:1–3ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- Psalm 147:19–20 ಕೀರ್ತನೆಗಳು 147:19–20ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- 2 Chronicles 2:5–6 2 ಪೂರ್ವಕಾಲವೃತ್ತಾಂತ 2:5–6ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ. ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- Deuteronomy 4:34–36 ಧರ್ಮೋಪದೇಶಕಾಂಡ 4:34–36ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ? ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.