Psalms · chapter 76 · verse 3
Psalm 76:3 in Kannada
ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
Alliye billina baanagalannoo guraaniyannoo kattiyannoo yuddhavannoo muridubittanu. Selaa.
Psalm 76:3 in English
- King James Version (KJV)
- There brake he the arrows of the bow, the shield, and the sword, and the battle. Selah.
- World English Bible (WEB)
- There he broke the flaming arrows of the bow, the shield, and the sword, and the weapons of war. Selah.
- American Standard Version (ASV)
- There he brake the arrows of the bow; The shield, and the sword, and the battle. [Selah
- Bible in Basic English (BBE)
- There were the arrows of the bow broken, there he put an end to body-cover, sword, and fight. (Selah.)
- Darby Translation (DBY)
- There broke he the flashings of the bow, shield and sword and battle. Selah.
- Webster's Bible (WBS)
- There he broke the arrows of the bow, the shield, and the sword, and the battle. Selah.
- Young's Literal Translation (YLT)
- There he hath shivered arrows of a bow, Shield, and sword, and battle. Selah.
Read in context
- 1ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
- 2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- 3ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
- 4ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
- 5ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
Cross references
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Isaiah 37:35–36 ಯೆಶಾಯ 37:35–36ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Ezekiel 39:3–4 ಯೆಹೆಜ್ಕೇಲನು 39:3–4ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು. ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
- Ezekiel 39:9–10 ಯೆಹೆಜ್ಕೇಲನು 39:9–10ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು. ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 2 Chronicles 32:21 2 ಪೂರ್ವಕಾಲವೃತ್ತಾಂತ 32:21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
- 2 Chronicles 20:25 2 ಪೂರ್ವಕಾಲವೃತ್ತಾಂತ 20:25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
- 2 Chronicles 14:12–13 2 ಪೂರ್ವಕಾಲವೃತ್ತಾಂತ 14:12–13ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು. ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.