Psalms · chapter 76 · verse 4
Psalm 76:4 in Kannada
ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
Betegaliruva bettagaliginta neenu prakaashavu llavanoo shreshthanoo aagiddee.
Psalm 76:4 in English
- King James Version (KJV)
- Thou [art] more glorious [and] excellent than the mountains of prey.
- World English Bible (WEB)
- Glorious are you, and excellent, more than mountains of game.
- American Standard Version (ASV)
- Glorious art thou [and] excellent, From the mountains of prey.
- Bible in Basic English (BBE)
- You are shining and full of glory, more than the eternal mountains.
- Darby Translation (DBY)
- More glorious art thou, more excellent, than the mountains of prey.
- Webster's Bible (WBS)
- Thou [art] more glorious [and] excellent than the mountains of prey.
- Young's Literal Translation (YLT)
- Bright [art] Thou, honourable above hills of prey.
Read in context
- 2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- 3ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
- 4ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
- 5ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
- 6ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
Cross references
- Ezekiel 19:1–4 ಯೆಹೆಜ್ಕೇಲನು 19:1–4ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು. ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
- Daniel 7:17–28 ದಾನಿಯೇಲನು 7:17–28ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ. ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು. ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ. ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು. ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು; ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು. ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು. ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು. ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು. ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Ezekiel 38:12–13 ಯೆಹೆಜ್ಕೇಲನು 38:12–13ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ. ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Daniel 7:4–8 ದಾನಿಯೇಲನು 7:4–8ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Ezekiel 19:6 ಯೆಹೆಜ್ಕೇಲನು 19:6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.