Psalms · chapter 77 · verse 15
Psalm 77:15 in Kannada
ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
Yaakobana mattu yosephana makkalaada ninna janarannu tolininda vimochane maadiddee selaa.
Psalm 77:15 in English
- King James Version (KJV)
- Thou hast with [thine] arm redeemed thy people, the sons of Jacob and Joseph. Selah.
- World English Bible (WEB)
- You have redeemed your people with your arm, the sons of Jacob and Joseph. Selah.
- American Standard Version (ASV)
- Thou hast with thine arm redeemed thy people, The sons of Jacob and Joseph. [Selah
- Bible in Basic English (BBE)
- With your arm you have made your people free, the sons of Jacob and Joseph. (Selah.)
- Darby Translation (DBY)
- Thou hast with [thine] arm redeemed thy people, the sons of Jacob and Joseph. Selah.
- Webster's Bible (WBS)
- Thou hast with [thy] arm redeemed thy people, the sons of Jacob and Joseph. Selah.
- Young's Literal Translation (YLT)
- Thou hast redeemed with strength Thy people, The sons of Jacob and Joseph. Selah.
Read in context
- 13ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
- 14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
- 15ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
- 16ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
- 17ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
Cross references
- Exodus 6:6 ವಿಮೋಚನಕಾಂಡ 6:6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- Deuteronomy 9:29 ಧರ್ಮೋಪದೇಶಕಾಂಡ 9:29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Deuteronomy 9:26 ಧರ್ಮೋಪದೇಶಕಾಂಡ 9:26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
- Psalm 74:2 ಕೀರ್ತನೆಗಳು 74:2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- Psalm 136:11–12 ಕೀರ್ತನೆಗಳು 136:11–12ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- Genesis 48:3–20 ಆದಿಕಾಂಡ 48:3–20ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು. ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು. ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು. ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ. ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು. ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು. ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು. ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು. ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.