Psalms · chapter 77 · verse 5
Psalm 77:5 in Kannada
ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
Puraa tana divasagalannoo aadikaalada varushagalannoo yochisidenu.
Psalm 77:5 in English
- King James Version (KJV)
- I have considered the days of old, the years of ancient times.
- World English Bible (WEB)
- I have considered the days of old, the years of ancient times.
- American Standard Version (ASV)
- I have considered the days of old, The years of ancient times.
- Bible in Basic English (BBE)
- My thoughts go back to the days of the past, to the years which are gone.
- Darby Translation (DBY)
- I consider the days of old, the years of ancient times.
- Webster's Bible (WBS)
- I have considered the days of old, the years of ancient times.
- Young's Literal Translation (YLT)
- I have reckoned the days of old, The years of the ages.
Read in context
- 3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- 4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- 5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
- 6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- 7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
Cross references
- Deuteronomy 32:7 ಧರ್ಮೋಪದೇಶಕಾಂಡ 32:7ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Psalm 143:5 ಕೀರ್ತನೆಗಳು 143:5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
- Psalm 44:1 ಕೀರ್ತನೆಗಳು 44:1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
- Isaiah 63:9–15 ಯೆಶಾಯ 63:9–15ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ. ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Micah 7:14–15 ಮೀಕ 7:14–15ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ. ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
- Psalm 74:12–18 ಕೀರ್ತನೆಗಳು 74:12–18ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ. ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ. ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ. ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ. ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ. ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ. ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.