Psalms · chapter 77 · verse 6
Psalm 77:6 in Kannada
ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
Nanna haadannu raatriyalli jnyaapaka maadikolluttene; nanna hrudayada sangada maataa duttene; nanna aatmavu parishodhane maaditu.
Psalm 77:6 in English
- King James Version (KJV)
- I call to remembrance my song in the night: I commune with mine own heart: and my spirit made diligent search.
- World English Bible (WEB)
- I remember my song in the night. I consider in my own heart; my spirit diligently inquires:
- American Standard Version (ASV)
- I call to remembrance my song in the night: I commune with mine own heart; And my spirit maketh diligent search.
- Bible in Basic English (BBE)
- The memory of my song comes back to me in the night; my thoughts are moving in my heart; my spirit is searching with care.
- Darby Translation (DBY)
- I remember my song in the night; I muse in mine own heart, and my spirit maketh diligent search.
- Webster's Bible (WBS)
- I call to remembrance my song in the night: I commune with my own heart: and my spirit made diligent search.
- Young's Literal Translation (YLT)
- I remember my music in the night, With my heart I meditate, and my spirit doth search diligently:
Read in context
- 4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- 5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
- 6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- 7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
- 8ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
Cross references
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- Psalm 139:23–24 ಕೀರ್ತನೆಗಳು 139:23–24ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು. ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- Job 35:10 ಯೋಬನು 35:10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- Ecclesiastes 1:16 ಪ್ರಸಂಗಿ 1:16ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- Jonah 1:2 ಯೋನ 1:2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- Habakkuk 3:17–18 ಹಬಕ್ಕೂಕ 3:17–18ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- 1 Corinthians 11:28–32 1 ಕೊರಿಂಥದವರಿಗೆ 11:28–32ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು. ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.