Psalms · chapter 78 · verse 1
Psalm 78:1 in Kannada
ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
O nanna janare, nanna nyaayapramaanakke kivigodiri; nanna baayi maatugalige nimma kivigalannu boggisiri.
Psalm 78:1 in English
- King James Version (KJV)
- Maschil of Asaph. Give ear, O my people, [to] my law: incline your ears to the words of my mouth.
- World English Bible (WEB)
- A contemplation by Asaph. Hear my teaching, my people. Turn your ears to the words of my mouth.
- American Standard Version (ASV)
- Maschil of Asaph. Give ear, O my people, to my law: Incline your ears to the words of my mouth.
- Bible in Basic English (BBE)
- Maschil. Of Asaph. Give ear, O my people, to my law; let your ears be bent down to the words of my mouth.
- Darby Translation (DBY)
- An instruction. Of Asaph. Give ear, O my people, to my law; incline your ears to the words of my mouth.
- Webster's Bible (WBS)
- Maschil of Asaph. Give ear, O my people, [to] my law: incline your ear to the words of my mouth.
- Young's Literal Translation (YLT)
- An Instruction of Asaph. Give ear, O my people, to my law, Incline your ear to sayings of my mouth.
Read in context
- 1ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
- 2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
- 3ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
Cross references
- Isaiah 51:4 ಯೆಶಾಯ 51:4ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Proverbs 8:4–6 ಜ್ಞಾನೋಕ್ತಿಗಳು 8:4–6ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ. ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ. ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Judges 5:3 ನ್ಯಾಯಸ್ಥಾಪಕರು 5:3ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
- Psalm 49:1–3 ಕೀರ್ತನೆಗಳು 49:1–3ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ. ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- 2 Chronicles 15:1–16 2 ಪೂರ್ವಕಾಲವೃತ್ತಾಂತ 15:1–16ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ-- ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು. ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು. ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು. ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು. ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು. ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು. ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು. ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು. ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು. ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು. ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು. ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು. ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- Psalm 50:7 ಕೀರ್ತನೆಗಳು 50:7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
- Matthew 13:9 ಮತ್ತಾಯನು 13:9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.