Psalms · chapter 78 · verse 13
Psalm 78:13 in Kannada
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
Aatanu samudravannu vibhaagisi avarannu daatisidanu; neerannu kuppeyaagi nillisi danu.
Psalm 78:13 in English
- King James Version (KJV)
- He divided the sea, and caused them to pass through; and he made the waters to stand as an heap.
- World English Bible (WEB)
- He split the sea, and caused them to pass through. He made the waters stand as a heap.
- American Standard Version (ASV)
- He clave the sea, and caused them to pass through; And he made the waters to stand as a heap.
- Bible in Basic English (BBE)
- The sea was cut in two so that they might go through; the waters were massed together on this side and on that.
- Darby Translation (DBY)
- He clave the sea, and caused them to pass through; and made the waters to stand as a heap;
- Webster's Bible (WBS)
- He divided the sea, and caused them to pass through; and he made the waters to stand as a heap.
- Young's Literal Translation (YLT)
- He cleft a sea, and causeth them to pass over, Yea, He causeth waters to stand as a heap.
Read in context
- 11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
- 12ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
- 13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- 14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- 15ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
Cross references
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
- Exodus 15:8 ವಿಮೋಚನಕಾಂಡ 15:8ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Psalm 106:9–10 ಕೀರ್ತನೆಗಳು 106:9–10ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು. ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
- Psalm 136:13–15 ಕೀರ್ತನೆಗಳು 136:13–15ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 66:6 ಕೀರ್ತನೆಗಳು 66:6ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
- 1 Corinthians 10:2–3 1 ಕೊರಿಂಥದವರಿಗೆ 10:2–3ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು; ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
- Psalm 38:7 ಕೀರ್ತನೆಗಳು 38:7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- Isaiah 63:13 ಯೆಶಾಯ 63:13ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- Habakkuk 3:15 ಹಬಕ್ಕೂಕ 3:15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
- Exodus 14:1–15 ವಿಮೋಚನಕಾಂಡ 14:1–15ಕರ್ತನು ಮಾತನಾಡಿ ಮೋಶೆಗೆ-- ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು. ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು. ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು. ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು. ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು. ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು. ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು. ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು. ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು. ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ? ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು. ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು. ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.