Psalms · chapter 78 · verse 17
Psalm 78:17 in Kannada
ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
Aadare avaru innoo aatanige virodhavaagi paapamaadi aranyadalli mahonnatanige kopa vannebbisi
Psalm 78:17 in English
- King James Version (KJV)
- And they sinned yet more against him by provoking the most High in the wilderness.
- World English Bible (WEB)
- Yet they still went on to sin against him, to rebel against the Most High in the desert.
- American Standard Version (ASV)
- Yet went they on still to sin against him, To rebel against the Most High in the desert.
- Bible in Basic English (BBE)
- And they went on sinning against him even more, turning away from the Most High in the waste land;
- Darby Translation (DBY)
- Yet they still went on sinning against him, provoking the Most High in the desert;
- Webster's Bible (WBS)
- And they sinned yet more against him by provoking the Most High in the wilderness.
- Young's Literal Translation (YLT)
- And they add still to sin against Him, To provoke the Most High in the dry place.
Read in context
- 15ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
- 16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
- 17ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
- 18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- 19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
Cross references
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Deuteronomy 9:8 ಧರ್ಮೋಪದೇಶಕಾಂಡ 9:8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
- Hebrews 3:16–19 ಇಬ್ರಿಯರಿಗೆ 3:16–19ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Deuteronomy 9:12–22 ಧರ್ಮೋಪದೇಶಕಾಂಡ 9:12–22ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು. ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ. ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು. ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು. ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು. ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು. ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು. ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು. ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು. ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
- Psalm 95:8–10 ಕೀರ್ತನೆಗಳು 95:8–10ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Psalm 106:13–32 ಕೀರ್ತನೆಗಳು 106:13–32ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು. ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು. ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು. ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು. ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು. ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು. ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು. ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು. ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು. ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು. ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು. ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು. ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
- Psalm 78:32 ಕೀರ್ತನೆಗಳು 78:32ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.