Psalms · chapter 78 · verse 32
Psalm 78:32 in Kannada
ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.
Idellaa aadaagyoo avaru innoo paapamaadi aatana aadbhutagalannu namba lilla.
Psalm 78:32 in English
- King James Version (KJV)
- For all this they sinned still, and believed not for his wondrous works.
- World English Bible (WEB)
- For all this they still sinned, and didn’t believe in his wondrous works.
- American Standard Version (ASV)
- For all this they sinned still, And believed not in his wondrous works.
- Bible in Basic English (BBE)
- For all this they went on sinning even more, and had no faith in his great wonders.
- Darby Translation (DBY)
- For all this, they sinned still, and believed not in his marvellous works;
- Webster's Bible (WBS)
- For all this they sinned still, and believed not for his wondrous works.
- Young's Literal Translation (YLT)
- With all this they have sinned again, And have not believed in His wonders.
Read in context
- 30ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
- 31ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
- 32ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.
- 33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- 34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
Cross references
- John 12:37 ಯೋಹಾನನು 12:37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Psalm 78:22 ಕೀರ್ತನೆಗಳು 78:22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- Psalm 78:11 ಕೀರ್ತನೆಗಳು 78:11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
- Numbers 14:1–45 ಅರಣ್ಯಕಾಂಡ 14:1–45ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು. ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು. ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ? ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು. ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು. ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ. ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು. ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು. ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು. ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ? ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು. ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ! ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ. ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು-- ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು. ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು. ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ. ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು. ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು. (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು. ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ-- ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು. ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು. ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು. ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು. ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು. ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ. ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ. ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು. ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು. ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Numbers 21:1–6 ಅರಣ್ಯಕಾಂಡ 21:1–6ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು. ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು. ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು, ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು. ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
- Numbers 25:1–18 ಅರಣ್ಯಕಾಂಡ 25:1–18ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು. ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು. ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು. ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು. ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು. ಆಗ ಕರ್ತನು ಮೋಶೆಗೆ-- ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು. ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು. ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು. ಕರ್ತನು ಮೋಶೆಗೆ-- ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು. ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- Numbers 16:1–17 ಅರಣ್ಯಕಾಂಡ 16:1–17ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು. ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು. ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ: ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು. ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ. ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ? ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು. ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ, ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ? ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು. ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು. ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.