Psalms · chapter 78 · verse 43
Psalm 78:43 in Kannada
ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
Aiguptadalli aada soochaka kaaryagalannoo son bailinalli nadisida adbhuta galannoo maadida divasavannoo aatana kaiyannoo avaru jnyaapakamaadikollalilla.
Psalm 78:43 in English
- King James Version (KJV)
- How he had wrought his signs in Egypt, and his wonders in the field of Zoan:
- World English Bible (WEB)
- how he set his signs in Egypt, his wonders in the field of Zoan,
- American Standard Version (ASV)
- How he set his signs in Egypt, And his wonders in the field of Zoan,
- Bible in Basic English (BBE)
- How he had done his signs in Egypt, and his wonders in the field of Zoan;
- Darby Translation (DBY)
- How he set his signs in Egypt, and his miracles in the field of Zoan;
- Webster's Bible (WBS)
- How he had wrought his signs in Egypt, and his wonders in the field of Zoan:
- Young's Literal Translation (YLT)
- When He set His signs in Egypt, And His wonders in the field of Zoan,
Read in context
- 41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- 42ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
- 43ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
- 44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
- 45ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.
Cross references
- Exodus 4:21 ವಿಮೋಚನಕಾಂಡ 4:21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- Exodus 3:19–20 ವಿಮೋಚನಕಾಂಡ 3:19–20ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ. ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Deuteronomy 6:22 ಧರ್ಮೋಪದೇಶಕಾಂಡ 6:22ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
- Psalm 105:27–38 ಕೀರ್ತನೆಗಳು 105:27–38ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
- Nehemiah 9:10 ನೆಹೆಮೀಯ 9:10ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
- Exodus 7:3 ವಿಮೋಚನಕಾಂಡ 7:3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Psalm 135:9 ಕೀರ್ತನೆಗಳು 135:9ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.