Psalms · chapter 78 · verse 49
Psalm 78:49 in Kannada
ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
Upadrapadisuva dootaranno embante tanna kopada uriyannu ugra, rosha, ikkattugalannu avara mele surisidanu.
Psalm 78:49 in English
- King James Version (KJV)
- He cast upon them the fierceness of his anger, wrath, and indignation, and trouble, by sending evil angels [among them].
- World English Bible (WEB)
- He threw on them the fierceness of his anger, wrath, indignation, and trouble, and a band of angels of evil.
- American Standard Version (ASV)
- He cast upon them the fierceness of his anger, Wrath, and indignation, and trouble, A band of angels of evil.
- Bible in Basic English (BBE)
- He sent on them the heat of his wrath, his bitter disgust, letting loose evil angels among them.
- Darby Translation (DBY)
- He cast upon them the fierceness of his anger, wrath, and indignation, and distress, — a mission of angels of woes.
- Webster's Bible (WBS)
- He cast upon them the fierceness of his anger, wrath, and indignation, and trouble, by sending evil angels [among them] .
- Young's Literal Translation (YLT)
- He sendeth on them the fury of His anger, Wrath, and indignation, and distress — A discharge of evil messengers.
Read in context
- 47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
- 48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- 49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
- 50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
- 51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
Cross references
- 1 Kings 22:21–22 1 ಅರಸುಗಳು 22:21–22ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- Exodus 15:7 ವಿಮೋಚನಕಾಂಡ 15:7ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
- 2 Samuel 24:16 2 ಸಮುವೇಲನು 24:16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Lamentations 4:11 ಪ್ರಲಾಪಗಳು 4:11ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
- Job 20:23 ಯೋಬನು 20:23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Job 2:6–7 ಯೋಬನು 2:6–7ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು. ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Job 1:12 ಯೋಬನು 1:12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Isaiah 42:25 ಯೆಶಾಯ 42:25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.