Psalms · chapter 78 · verse 52
Psalm 78:52 in Kannada
ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
Kurigala haage tanna janarannu horatandu, mandeya haage aranyadalli avarannu nadisidanu.
Psalm 78:52 in English
- King James Version (KJV)
- But made his own people to go forth like sheep, and guided them in the wilderness like a flock.
- World English Bible (WEB)
- But he led out his own people like sheep, and guided them in the wilderness like a flock.
- American Standard Version (ASV)
- But he led forth his own people like sheep, And guided them in the wilderness like a flock.
- Bible in Basic English (BBE)
- But he took his people out like sheep, guiding them in the waste land like a flock.
- Darby Translation (DBY)
- And he made his own people to go forth like sheep, and guided them in the wilderness like a flock;
- Webster's Bible (WBS)
- But made his own people to go forth like sheep, and guided them in the wilderness like a flock.
- Young's Literal Translation (YLT)
- And causeth His people to journey as a flock, And guideth them as a drove in a wilderness,
Read in context
- 50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
- 51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- 52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
- 53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- 54ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
Cross references
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- John 10:11–42 ಯೋಹಾನನು 10:11–42ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ. ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ. ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ. ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ. ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು. ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು. ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು. ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು. ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು. ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು. ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು; ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು. ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ. ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ? ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ. ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು. ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು. ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
- Isaiah 63:11–14 ಯೆಶಾಯ 63:11–14ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- Luke 15:4–6 ಲೂಕನು 15:4–6ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Psalm 95:7 ಕೀರ್ತನೆಗಳು 95:7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- Psalm 105:37 ಕೀರ್ತನೆಗಳು 105:37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- Jeremiah 23:2–4 ಯೆರೆಮೀಯ 23:2–4ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು. ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- Ezekiel 34:11–31 ಯೆಹೆಜ್ಕೇಲನು 34:11–31ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು. ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು. ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ? ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು. ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ. ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ. ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು. ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ; ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು. ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ. ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ. ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.