Psalms · chapter 78 · verse 53
Psalm 78:53 in Kannada
ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
Avarannu surakshitavaagi nadisidakaarana avaru hedaralilla; aadare samudravu avara shatrugalannu muchchibittitu.
Psalm 78:53 in English
- King James Version (KJV)
- And he led them on safely, so that they feared not: but the sea overwhelmed their enemies.
- World English Bible (WEB)
- He led them safely, so that they weren’t afraid, but the sea overwhelmed their enemies.
- American Standard Version (ASV)
- And he led them safely, so that they feared not; But the sea overwhelmed their enemies.
- Bible in Basic English (BBE)
- He took them on safely so that they had no fear; but their haters were covered by the sea.
- Darby Translation (DBY)
- And he led them safely, so that they were without fear; and the sea covered their enemies.
- Webster's Bible (WBS)
- And he led them on safely, so that they feared not: but the sea overwhelmed their enemies.
- Young's Literal Translation (YLT)
- And He leadeth them confidently, And they have not been afraid, And their enemies hath the sea covered.
Read in context
- 51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- 52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
- 53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- 54ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
- 55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
Cross references
- Exodus 14:19–20 ವಿಮೋಚನಕಾಂಡ 14:19–20ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Exodus 15:10 ವಿಮೋಚನಕಾಂಡ 15:10ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Exodus 14:27–28 ವಿಮೋಚನಕಾಂಡ 14:27–28ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Psalm 136:15 ಕೀರ್ತನೆಗಳು 136:15ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Exodus 14:15 ವಿಮೋಚನಕಾಂಡ 14:15ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.