Psalms · chapter 78 · verse 57
Psalm 78:57 in Kannada
ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
Tamma pitrugala haage tirugibiddu apa nambigastaraagi mosada billina haage vaare yaadaru.
Psalm 78:57 in English
- King James Version (KJV)
- But turned back, and dealt unfaithfully like their fathers: they were turned aside like a deceitful bow.
- World English Bible (WEB)
- but turned back, and dealt treacherously like their fathers. They were twisted like a deceitful bow.
- American Standard Version (ASV)
- But turned back, and dealt treacherously like their fathers: They were turned aside like a deceitful bow.
- Bible in Basic English (BBE)
- Their hearts were turned back and untrue like their fathers; they were turned to one side like a twisted bow.
- Darby Translation (DBY)
- And they drew back and dealt treacherously like their fathers: they turned like a deceitful bow.
- Webster's Bible (WBS)
- But turned back, and dealt unfaithfully like their fathers: they were turned aside like a deceitful bow.
- Young's Literal Translation (YLT)
- And they turn back, And deal treacherously like their fathers, They have been turned like a deceitful bow,
Read in context
- 55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- 56ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
- 57ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
- 58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- 59ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
Cross references
- Hosea 7:16 ಹೋಶೇಯ 7:16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- Ezekiel 20:27–28 ಯೆಹೆಜ್ಕೇಲನು 20:27–28ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು. ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
- Judges 3:5–7 ನ್ಯಾಯಸ್ಥಾಪಕರು 3:5–7ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Psalm 78:10–37 ಕೀರ್ತನೆಗಳು 78:10–37ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು. ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು. ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು. ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು. ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು. ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು. ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು. ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ. ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು. ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು. ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ. ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು. ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Judges 3:12 ನ್ಯಾಯಸ್ಥಾಪಕರು 3:12ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
- Psalm 78:41 ಕೀರ್ತನೆಗಳು 78:41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.