Psalms · chapter 78 · verse 70
Psalm 78:70 in Kannada
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
Idallade tanna sevakanaada daaveedanannu aadukondu, kuri hattigalinda avanannu tegedu,
Psalm 78:70 in English
- King James Version (KJV)
- He chose David also his servant, and took him from the sheepfolds:
- World English Bible (WEB)
- He also chose David his servant, and took him from the sheepfolds;
- American Standard Version (ASV)
- He chose David also his servant, And took him from the sheepfolds:
- Bible in Basic English (BBE)
- He took David to be his servant, taking him from the place of the flocks;
- Darby Translation (DBY)
- And he chose David his servant, and took him from the sheepfolds:
- Webster's Bible (WBS)
- He chose David also his servant, and took him from the sheep-folds:
- Young's Literal Translation (YLT)
- And He fixeth on David His servant, And taketh him from the folds of a flock,
Read in context
- 68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
- 69ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- 70ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
- 71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 72ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
Cross references
- 1 Samuel 16:11–12 1 ಸಮುವೇಲನು 16:11–12ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು. ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
- Acts 13:22 ಅಪೊಸ್ತಲರ ಕೃತ್ಯಗಳು 13:22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
- Amos 7:14–15 ಆಮೋಸ 7:14–15ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
- 2 Samuel 7:8 2 ಸಮುವೇಲನು 7:8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
- 2 Samuel 6:21 2 ಸಮುವೇಲನು 6:21ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
- Psalm 89:19–20 ಕೀರ್ತನೆಗಳು 89:19–20ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ. ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- 1 Samuel 17:15–54 1 ಸಮುವೇಲನು 17:15–54ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು. ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು. ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು. ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು. ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು. ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು. ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು. ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು. ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು. ಇಸ್ರಾಯೇಲ್ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು. ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು. ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು. ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು; ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು. ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು. ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು. ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು. ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು. ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು. ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು. ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು. ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು. ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು. ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು. ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು. ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು. ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು. ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು. ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು. ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು. ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು. ಇಸ್ರಾಯೇಲ್ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು. ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
- 1 Kings 19:19–20 1 ಅರಸುಗಳು 19:19–20ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Exodus 3:10 ವಿಮೋಚನಕಾಂಡ 3:10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
- 2 Samuel 3:18 2 ಸಮುವೇಲನು 3:18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
- Matthew 4:18–22 ಮತ್ತಾಯನು 4:18–22ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.