Psalms · chapter 78 · verse 9
Psalm 78:9 in Kannada
ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
Ephraayaamana makkalu aayudhagalannu dharisi billugalannu hottukondu kaalagada divasadalli hintirugikondaru.
Psalm 78:9 in English
- King James Version (KJV)
- The children of Ephraim, [being] armed, [and] carrying bows, turned back in the day of battle.
- World English Bible (WEB)
- The children of Ephraim, being armed and carrying bows, turned back in the day of battle.
- American Standard Version (ASV)
- The children of Ephraim, being armed and carrying bows, Turned back in the day of battle.
- Bible in Basic English (BBE)
- The children of Ephraim, armed with bows, were turned back on the day of the fight.
- Darby Translation (DBY)
- The sons of Ephraim, armed bowmen, turned back in the day of battle.
- Webster's Bible (WBS)
- The children of Ephraim, [being] armed, [and] carrying bows, turned back in the day of battle.
- Young's Literal Translation (YLT)
- Sons of Ephraim — armed bearers of bow, Have turned in a day of conflict.
Read in context
- 7ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
- 8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- 9ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
- 10ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
- 11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
Cross references
- 1 Samuel 31:1 1 ಸಮುವೇಲನು 31:1ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- Deuteronomy 1:41–44 ಧರ್ಮೋಪದೇಶಕಾಂಡ 1:41–44ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ. ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು. ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ. ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
- Psalm 78:57 ಕೀರ್ತನೆಗಳು 78:57ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
- Joshua 17:16–18 ಯೆಹೋಶುವ 17:16–18ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು. ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು. ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
- Judges 20:39 ನ್ಯಾಯಸ್ಥಾಪಕರು 20:39ಇಸ್ರಾಯೇಲ್ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
- 1 Samuel 4:10 1 ಸಮುವೇಲನು 4:10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
- Judges 9:28 ನ್ಯಾಯಸ್ಥಾಪಕರು 9:28ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?
- 1 Chronicles 12:2 1 ಪೂರ್ವಕಾಲವೃತ್ತಾಂತ 12:2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
- Luke 22:33 ಲೂಕನು 22:33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
- Judges 9:38–40 ನ್ಯಾಯಸ್ಥಾಪಕರು 9:38–40ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು. ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು. ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.