Psalms · chapter 79 · verse 10
Psalm 79:10 in Kannada
ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
Avara devaru elli endu anyajanaangagalu yaake helabeku? Chelliruva ninna sevakara raktada prati dandaneyannu namma kannugala munde anya janaangagalalli tiliyalpadali.
Psalm 79:10 in English
- King James Version (KJV)
- Wherefore should the heathen say, Where [is] their God? let him be known among the heathen in our sight [by] the revenging of the blood of thy servants [which is] shed.
- World English Bible (WEB)
- Why should the nations say, “Where is their God?” Let it be known among the nations, before our eyes, that vengeance for your servants’ blood is being poured out.
- American Standard Version (ASV)
- Wherefore should the nations say, Where is their God? Let the avenging of the blood of thy servants which is shed Be known among the nations in our sight.
- Bible in Basic English (BBE)
- Why may the nations say, Where is their God? Let payment for the blood of your servants be made openly among the nations before our eyes.
- Darby Translation (DBY)
- Wherefore should the nations say, Where is their God? Let the avenging of the blood of thy servants that is shed be known among the nations in our sight.
- Webster's Bible (WBS)
- Why should the heathen say, Where [is] their God? let him be known among the heathen in our sight [by] avenging the blood of thy servants [which is] shed.
- Young's Literal Translation (YLT)
- Why do the nations say, 'Where [is] their God?' Let be known among the nations before our eyes, The vengeance of the blood of Thy servants that is shed.
Read in context
- 8ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
- 9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- 10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
- 11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
- 12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
Cross references
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Psalm 42:3 ಕೀರ್ತನೆಗಳು 42:3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
- Exodus 7:5 ವಿಮೋಚನಕಾಂಡ 7:5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- Psalm 94:1 ಕೀರ್ತನೆಗಳು 94:1ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
- Ezekiel 39:21–22 ಯೆಹೆಜ್ಕೇಲನು 39:21–22ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು. ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
- Psalm 115:2 ಕೀರ್ತನೆಗಳು 115:2ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
- Psalm 58:11 ಕೀರ್ತನೆಗಳು 58:11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Joel 2:17 ಯೋವೇಲ 2:17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?