Psalms · chapter 79 · verse 6
Psalm 79:6 in Kannada
ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
Ninnannu tiliyada janaanga gala meleyoo ninna hesarannu kareyada raajyagala meleyoo ninna kopavannu hoyidubidu.
Psalm 79:6 in English
- King James Version (KJV)
- Pour out thy wrath upon the heathen that have not known thee, and upon the kingdoms that have not called upon thy name.
- World English Bible (WEB)
- Pour out your wrath on the nations that don’t know you, on the kingdoms that don’t call on your name,
- American Standard Version (ASV)
- Pour out thy wrath upon the nations that know thee not, And upon the kingdoms that call not upon thy name.
- Bible in Basic English (BBE)
- Let your wrath be on the nations who have no knowledge of you, and on the kingdoms who have not made prayer to your name.
- Darby Translation (DBY)
- Pour out thy fury upon the nations that have not known thee, and upon the kingdoms that call not upon thy name:
- Webster's Bible (WBS)
- Pour out thy wrath upon the heathen that have not known thee, and upon the kingdoms that have not called upon thy name.
- Young's Literal Translation (YLT)
- Pour Thy fury on the nations who have not known Thee, And on kingdoms that have not called in Thy name.
Read in context
- 4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- 5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- 6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- 7ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
- 8ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
Cross references
- Jeremiah 10:25 ಯೆರೆಮೀಯ 10:25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- Psalm 69:24 ಕೀರ್ತನೆಗಳು 69:24ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
- Psalm 53:4 ಕೀರ್ತನೆಗಳು 53:4ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- Isaiah 45:4–5 ಯೆಶಾಯ 45:4–5ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ. ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Psalm 9:16–17 ಕೀರ್ತನೆಗಳು 9:16–17ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ. ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- John 16:3 ಯೋಹಾನನು 16:3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- Isaiah 21:1–17 ಯೆಶಾಯ 21:1–17ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ. ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ. ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ. ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು. ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ. ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು? ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು. ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ. ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ. ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ. ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ. ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
- Jeremiah 25:29 ಯೆರೆಮೀಯ 25:29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.