Psalms · chapter 8 · verse 1
Psalm 8:1 in Kannada
ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
Namma devaraada o kartane, ninna hesaru bhoomiyallellaa eshto shreshthavaagide. Ninna mahimeyannu aakaashagala mele irisiddee.
Psalm 8:1 in English
- King James Version (KJV)
- To the chief Musician upon Gittith, A Psalm of David. O LORD our Lord, how excellent [is] thy name in all the earth! who hast set thy glory above the heavens.
- World English Bible (WEB)
- For the Chief Musician; on an instrument of Gath. A Psalm by David. LORD, our Lord, how majestic is your name in all the earth! You have set your glory above the heavens!
- American Standard Version (ASV)
- For the Chief Musician; set to the Gittith. A Psalm of David. O Jehovah, our Lord, How excellent is thy name in all the earth, Who hast set thy glory upon the heavens!
- Bible in Basic English (BBE)
- To the chief music-maker on the Gittith. A Psalm. Of David. O Lord, our Lord, whose glory is higher than the heavens, how noble is your name in all the earth!
- Darby Translation (DBY)
- To the chief Musician. Upon the Gittith. A Psalm of David. Jehovah our Lord, how excellent is thy name in all the earth! who hast set thy majesty above the heavens.
- Webster's Bible (WBS)
- To the chief Musician upon Gittith, A Psalm of David. O LORD our Lord, how excellent [is] thy name in all the earth! who hast set thy glory above the heavens.
- Young's Literal Translation (YLT)
- To the Overseer, 'On the Gittith.' A Psalm of David. Jehovah, our Lord, How honourable Thy name in all the earth! Who settest thine honour on the heavens.
Read in context
- 1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
- 2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
- 3ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
Cross references
- Psalm 8:9 ಕೀರ್ತನೆಗಳು 8:9ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- Psalm 113:2–4 ಕೀರ್ತನೆಗಳು 113:2–4ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ. ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು. ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
- Psalm 57:5 ಕೀರ್ತನೆಗಳು 57:5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- Psalm 148:13 ಕೀರ್ತನೆಗಳು 148:13ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 57:10–11 ಕೀರ್ತನೆಗಳು 57:10–11ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ. ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Exodus 34:5–7 ವಿಮೋಚನಕಾಂಡ 34:5–7ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Habakkuk 3:3 ಹಬಕ್ಕೂಕ 3:3ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
- Psalm 145:1 ಕೀರ್ತನೆಗಳು 145:1ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
- Psalm 72:17–19 ಕೀರ್ತನೆಗಳು 72:17–19ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.