Psalms · chapter 80 · verse 4
Psalm 80:4 in Kannada
ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
Sainyagala devaraada o kartane, eshtaravarege ninna janara praarthanege virodhavaagi kopa golluttee?
Psalm 80:4 in English
- King James Version (KJV)
- O LORD God of hosts, how long wilt thou be angry against the prayer of thy people?
- World English Bible (WEB)
- LORD God of Armies, how long will you be angry against the prayer of your people?
- American Standard Version (ASV)
- O Jehovah God of hosts, How long wilt thou be angry against the prayer of thy people?
- Bible in Basic English (BBE)
- O Lord God of armies, how long will your wrath be burning against the rest of your people?
- Darby Translation (DBY)
- Jehovah, God of hosts, how long will thine anger smoke against the prayer of thy people?
- Webster's Bible (WBS)
- O LORD God of hosts, how long wilt thou be angry against the prayer of thy people?
- Young's Literal Translation (YLT)
- Jehovah, God of Hosts, till when? Thou hast burned against the prayer of Thy people.
Read in context
- 2ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
- 3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
- 5ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
- 6ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
Cross references
- Psalm 85:5 ಕೀರ್ತನೆಗಳು 85:5ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Matthew 15:22–28 ಮತ್ತಾಯನು 15:22–28ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Lamentations 3:44 ಪ್ರಲಾಪಗಳು 3:44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- Psalm 59:5 ಕೀರ್ತನೆಗಳು 59:5ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
- Psalm 79:5 ಕೀರ್ತನೆಗಳು 79:5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Isaiah 58:6–9 ಯೆಶಾಯ 58:6–9ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ? ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- Isaiah 58:2–3 ಯೆಶಾಯ 58:2–3ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ. ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Luke 18:1–8 ಲೂಕನು 18:1–8ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು-- ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು. ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ. ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.