Psalms · chapter 81 · verse 3
Psalm 81:3 in Kannada
ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
Amaavaasyeyalliyoo nemakavaada parishuddha habbada divasadalliyoo tutooriyannu oodiri.
Psalm 81:3 in English
- King James Version (KJV)
- Blow up the trumpet in the new moon, in the time appointed, on our solemn feast day.
- World English Bible (WEB)
- Blow the trumpet at the New Moon, at the full moon, on our feast day.
- American Standard Version (ASV)
- Blow the trumpet at the new moon, At the full moon, on our feast-day.
- Bible in Basic English (BBE)
- Let the horn be sounded in the time of the new moon, at the full moon, on our holy feast-day:
- Darby Translation (DBY)
- Blow the trumpet at the new moon, at the set time, on our feast day:
- Webster's Bible (WBS)
- Blow the trumpet in the new moon, in the time appointed, on our solemn feast day.
- Young's Literal Translation (YLT)
- Blow in the month a trumpet, In the new moon, at the day of our festival,
Read in context
- 1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
- 2ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
- 3ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- 4ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
- 5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
Cross references
- Leviticus 23:24–25 ಯಾಜಕಕಾಂಡ 23:24–25ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು. ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.
- Numbers 15:3 ಅರಣ್ಯಕಾಂಡ 15:3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
- 2 Chronicles 2:4 2 ಪೂರ್ವಕಾಲವೃತ್ತಾಂತ 2:4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- 2 Chronicles 13:14 2 ಪೂರ್ವಕಾಲವೃತ್ತಾಂತ 13:14ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
- Deuteronomy 16:15 ಧರ್ಮೋಪದೇಶಕಾಂಡ 16:15ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- Numbers 10:1–10 ಅರಣ್ಯಕಾಂಡ 10:1–10ಕರ್ತನು ಮೋಶೆಗೆ ಹೇಳಿದ್ದೇನೆಂದರೆ ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 1 Chronicles 16:6 1 ಪೂರ್ವಕಾಲವೃತ್ತಾಂತ 16:6ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
- Nahum 1:15 ನಹೂಮ 1:15ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
- 2 Kings 4:23 2 ಅರಸುಗಳು 4:23ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
- 1 Chronicles 16:42 1 ಪೂರ್ವಕಾಲವೃತ್ತಾಂತ 16:42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Psalm 98:6 ಕೀರ್ತನೆಗಳು 98:6ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.