Psalms · chapter 81 · verse 7
Psalm 81:7 in Kannada
ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
Ikkattinalli karedi; aaga naanu ninnannu tappisibittenu; gudugina mareyalli ninage uttarakottu meribaa neerugala baliyalli ninnannu shodhisidenu selaa.
Psalm 81:7 in English
- King James Version (KJV)
- Thou calledst in trouble, and I delivered thee; I answered thee in the secret place of thunder: I proved thee at the waters of Meribah. Selah.
- World English Bible (WEB)
- You called in trouble, and I delivered you. I answered you in the secret place of thunder. I tested you at the waters of Meribah.” Selah.
- American Standard Version (ASV)
- Thou calledst in trouble, and I delivered thee; I answered thee in the secret place of thunder; I proved thee at the waters of Meribah. [Selah
- Bible in Basic English (BBE)
- You gave a cry in your trouble, and I made you free; I gave you an answer in the secret place of the thunder; I put you to the test at the waters of Meribah. (Selah.)
- Darby Translation (DBY)
- Thou calledst in trouble, and I delivered thee; I answered thee in the secret place of thunder; I proved thee at the waters of Meribah. Selah.
- Webster's Bible (WBS)
- Thou calledst in trouble, and I delivered thee; I answered thee in the secret place of thunder: I proved thee at the waters of Meribah. Selah.
- Young's Literal Translation (YLT)
- In distress thou hast called and I deliver thee, I answer thee in the secret place of thunder, I try thee by the waters of Meribah. Selah.
Read in context
- 5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
- 6ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
- 7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- 8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
- 9ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
Cross references
- Exodus 19:19 ವಿಮೋಚನಕಾಂಡ 19:19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Numbers 20:13 ಅರಣ್ಯಕಾಂಡ 20:13ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- Exodus 2:23 ವಿಮೋಚನಕಾಂಡ 2:23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 91:14–15 ಕೀರ್ತನೆಗಳು 91:14–15ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು. ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Exodus 14:10 ವಿಮೋಚನಕಾಂಡ 14:10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
- Exodus 14:30–31 ವಿಮೋಚನಕಾಂಡ 14:30–31ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು. ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Exodus 14:24 ವಿಮೋಚನಕಾಂಡ 14:24ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
- Deuteronomy 33:8 ಧರ್ಮೋಪದೇಶಕಾಂಡ 33:8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- Exodus 17:2–7 ವಿಮೋಚನಕಾಂಡ 17:2–7ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು. ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು. ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು. ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
- Numbers 20:24 ಅರಣ್ಯಕಾಂಡ 20:24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
- Exodus 20:18–21 ವಿಮೋಚನಕಾಂಡ 20:18–21ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು. ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು. ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.