Psalms · chapter 82 · verse 4
Psalm 82:4 in Kannada
ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
Daridranannoo badava nannoo dushtara kaiyinda bidisiri.
Psalm 82:4 in English
- King James Version (KJV)
- Deliver the poor and needy: rid [them] out of the hand of the wicked.
- World English Bible (WEB)
- Rescue the weak and needy. Deliver them out of the hand of the wicked.”
- American Standard Version (ASV)
- Rescue the poor and needy: Deliver them out of the hand of the wicked.
- Bible in Basic English (BBE)
- Be the saviour of the poor and those who have nothing: take them out of the hand of the evil-doers.
- Darby Translation (DBY)
- Rescue the poor and needy, deliver them out of the hand of the wicked.
- Webster's Bible (WBS)
- Deliver the poor and needy: deliver [them] from the hand of the wicked.
- Young's Literal Translation (YLT)
- Let the weak and needy escape, From the hand of the wicked deliver them.
Read in context
- 2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- 3ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
- 4ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- 5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- 6ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
Cross references
- Proverbs 24:11–12 ಜ್ಞಾನೋಕ್ತಿಗಳು 24:11–12ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Job 5:15–16 ಯೋಬನು 5:15–16ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ. ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- Job 29:12 ಯೋಬನು 29:12ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
- Psalm 140:12 ಕೀರ್ತನೆಗಳು 140:12ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- Job 29:16–17 ಯೋಬನು 29:16–17ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Nehemiah 5:1–13 ನೆಹೆಮೀಯ 5:1–13ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು. ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು. ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು. ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು. ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು. ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ. ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು. ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು. ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು. ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.