Psalms · chapter 83 · verse 5
Psalm 83:5 in Kannada
ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
Avaru kooda ekamanassaagi aalochane maadikondi ddaare; ninage virodhavaagi odambattiddaare.
Psalm 83:5 in English
- King James Version (KJV)
- For they have consulted together with one consent: they are confederate against thee:
- World English Bible (WEB)
- For they have conspired together with one mind. They form an alliance against you.
- American Standard Version (ASV)
- For they have consulted together with one consent; Against thee do they make a covenant:
- Bible in Basic English (BBE)
- For they have all come to an agreement; they are all joined together against you:
- Darby Translation (DBY)
- For they have consulted together with one heart: they have made an alliance together against thee.
- Webster's Bible (WBS)
- For they have consulted together with one consent: they are confederate against thee,
- Young's Literal Translation (YLT)
- For they consulted in heart together, Against Thee a covenant they make,
Read in context
- 3ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
- 4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
- 5ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
- 6ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
- 7ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
Cross references
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Revelation 17:13 ಪ್ರಕಟನೆ 17:13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Isaiah 7:5–7 ಯೆಶಾಯ 7:5–7ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- Revelation 19:19 ಪ್ರಕಟನೆ 19:19ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
- 2 Samuel 10:6–8 2 ಸಮುವೇಲನು 10:6–8ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು. ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು. ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- John 11:47–53 ಯೋಹಾನನು 11:47–53ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Isaiah 7:2 ಯೆಶಾಯ 7:2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- Joshua 10:3–5 ಯೆಹೋಶುವ 10:3–5ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ-- ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು. ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
- Acts 23:12–13 ಅಪೊಸ್ತಲರ ಕೃತ್ಯಗಳು 23:12–13ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.