Psalms · chapter 84 · verse 6
Psalm 84:6 in Kannada
ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
Baakaa taggannu daatuvaaga adannu buggeyaagi maaduttaare; maleyu kolagalannu tumbuttade.
Psalm 84:6 in English
- King James Version (KJV)
- [Who] passing through the valley of Baca make it a well; the rain also filleth the pools.
- World English Bible (WEB)
- Passing through the valley of Weeping, they make it a place of springs. Yes, the autumn rain covers it with blessings.
- American Standard Version (ASV)
- Passing through the valley of Weeping they make it a place of springs; Yea, the early rain covereth it with blessings.
- Bible in Basic English (BBE)
- Going through the valley of balsam-trees, they make it a place of springs; it is clothed with blessings by the early rain.
- Darby Translation (DBY)
- Passing through the valley of Baca, they make it a well-spring; yea, the early rain covereth it with blessings.
- Webster's Bible (WBS)
- [Who] passing through the valley of Baca make it a well; the rain also filleth the pools.
- Young's Literal Translation (YLT)
- Those passing through a valley of weeping, A fountain do make it, Blessings also cover the director.
Read in context
- 4ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ.
- 5ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
- 6ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
- 7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
- 8ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
Cross references
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Romans 5:3–5 ರೋಮಾಪುರದವರಿಗೆ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Psalm 68:9 ಕೀರ್ತನೆಗಳು 68:9ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
- Psalm 66:10–12 ಕೀರ್ತನೆಗಳು 66:10–12ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ. ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ; ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
- 2 Samuel 5:22–24 2 ಸಮುವೇಲನು 5:22–24ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು. ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- 2 Kings 3:9–20 2 ಅರಸುಗಳು 3:9–20ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು. ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು. ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು. ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು. ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು. ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ. ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು. ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು. ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು. ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು. ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.