Psalms · chapter 86 · verse 9
Psalm 86:9 in Kannada
ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
O kartane, neenu untumaadida janaangagalellaa bandu ninnannu aaraadhisi ninna hesarannu ghanapadi suvaru.
Psalm 86:9 in English
- King James Version (KJV)
- All nations whom thou hast made shall come and worship before thee, O Lord; and shall glorify thy name.
- World English Bible (WEB)
- All nations you have made will come and worship before you, Lord. They shall glorify your name.
- American Standard Version (ASV)
- All nations whom thou hast made shall come and worship before thee, O Lord; And they shall glorify thy name.
- Bible in Basic English (BBE)
- Let all the nations whom you have made come and give worship to you, O Lord, giving glory to your name.
- Darby Translation (DBY)
- All nations whom thou hast made shall come and worship before thee, O Lord, and shall glorify thy name.
- Webster's Bible (WBS)
- All nations whom thou hast made shall come and worship before thee, O LORD; and shall glorify thy name.
- Young's Literal Translation (YLT)
- All nations that Thou hast made Come and bow themselves before Thee, O Lord, And give honour to Thy name.
Read in context
- 7ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ.
- 8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- 9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- 10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- 11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
Cross references
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Isaiah 66:23 ಯೆಶಾಯ 66:23ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Psalm 66:4 ಕೀರ್ತನೆಗಳು 66:4ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
- Isaiah 2:2–4 ಯೆಶಾಯ 2:2–4ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Psalm 102:15 ಕೀರ್ತನೆಗಳು 102:15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Romans 15:9 ರೋಮಾಪುರದವರಿಗೆ 15:9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- Psalm 67:7 ಕೀರ್ತನೆಗಳು 67:7ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Isaiah 59:19 ಯೆಶಾಯ 59:19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
- Psalm 22:27–31 ಕೀರ್ತನೆಗಳು 22:27–31ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು. ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Isaiah 43:7 ಯೆಶಾಯ 43:7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.