Psalms · chapter 87 · verse 3
Psalm 87:3 in Kannada
ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
Devara pattanave, ninna vishayavaagi ghanavullavugalu helalpattive.
Psalm 87:3 in English
- King James Version (KJV)
- Glorious things are spoken of thee, O city of God. Selah.
- World English Bible (WEB)
- Glorious things are spoken about you, city of God. Selah.
- American Standard Version (ASV)
- Glorious things are spoken of thee, O city of God. [Selah
- Bible in Basic English (BBE)
- Noble things are said of you, O town of God. (Selah.)
- Darby Translation (DBY)
- Glorious things are spoken of thee, O city of God. Selah.
- Webster's Bible (WBS)
- Glorious things are spoken of thee, O city of God. Selah.
- Young's Literal Translation (YLT)
- Honourable things are spoken in Thee, O city of God. Selah.
Read in context
- 1ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
- 2ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
- 3ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
- 4ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
- 5ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
Cross references
- Ezekiel 37:27–28 ಯೆಹೆಜ್ಕೇಲನು 37:27–28ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು. ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Ezekiel 36:11–38 ಯೆಹೆಜ್ಕೇಲನು 36:11–38ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು; ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು. ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು. ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು. ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು. ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ. ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು. ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ. ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು. ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು. ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು. ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು. ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Revelation 21:10–27 ಪ್ರಕಟನೆ 21:10–27ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು. ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು. ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ. ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು. ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು. ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Psalm 48:2–3 ಕೀರ್ತನೆಗಳು 48:2–3ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- Hebrews 12:22–23 ಇಬ್ರಿಯರಿಗೆ 12:22–23ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- Revelation 14:1 ಪ್ರಕಟನೆ 14:1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- Jeremiah 31:12–13 ಯೆರೆಮೀಯ 31:12–13ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Isaiah 61:3–12 ಯೆಶಾಯ 61:3–12ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು. ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು. ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು. ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ. ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು. ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು. ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು. ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Psalm 46:4 ಕೀರ್ತನೆಗಳು 46:4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 125:1–2 ಕೀರ್ತನೆಗಳು 125:1–2ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- Isaiah 49:14–26 ಯೆಶಾಯ 49:14–26ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು. ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ. ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು. ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ. ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು. ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು. ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.