Psalms · chapter 87 · verse 5
Psalm 87:5 in Kannada
ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
Cheeyonina vishaya heluvadenandare --inthinthavaru adaralli huttidarendoo maho nnatanu taane adannu sthaapisuvanu.
Psalm 87:5 in English
- King James Version (KJV)
- And of Zion it shall be said, This and that man was born in her: and the highest himself shall establish her.
- World English Bible (WEB)
- Yes, of Zion it will be said, “This one and that one was born in her;” the Most High himself will establish her.
- American Standard Version (ASV)
- Yea, of Zion it shall be said, This one and that one was born in her; And the Most High himself will establish her.
- Bible in Basic English (BBE)
- And of Zion it will be said, This or that man had his birth there; and the Most High will make her strong.
- Darby Translation (DBY)
- And of Zion it shall be said, This one and that one was born in her; and the Most High himself shall establish her.
- Webster's Bible (WBS)
- And of Zion it shall be said, This and that man was born in her: and the Highest himself shall establish her.
- Young's Literal Translation (YLT)
- And of Zion it is said: Each one was born in her, And He, the Most High, doth establish her.
Read in context
- 3ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
- 4ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
- 5ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
- 6ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
- 7ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
Cross references
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- 1 Peter 1:23–24 1 ಪೇತ್ರನು 1:23–24ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು. ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Galatians 3:26–28 ಗಲಾತ್ಯದವರಿಗೆ 3:26–28ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Ezekiel 48:35 ಯೆಹೆಜ್ಕೇಲನು 48:35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- John 1:12–14 ಯೋಹಾನನು 1:12–14ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು. ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Isaiah 60:1–9 ಯೆಶಾಯ 60:1–9ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Isaiah 44:4–5 ಯೆಶಾಯ 44:4–5ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು. ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- John 3:3–5 ಯೋಹಾನನು 3:3–5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು. ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- Hebrews 12:22–24 ಇಬ್ರಿಯರಿಗೆ 12:22–24ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Psalm 48:8 ಕೀರ್ತನೆಗಳು 48:8ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.