Psalms · chapter 88 · verse 10
Psalm 88:10 in Kannada
ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
Sattavarige adbhutagalannu torisuviyo? Sattavaru eddu ninnannu kondaaduvaro? Selaa.
Psalm 88:10 in English
- King James Version (KJV)
- Wilt thou shew wonders to the dead? shall the dead arise [and] praise thee? Selah.
- World English Bible (WEB)
- Do you show wonders to the dead? Do the departed spirits rise up and praise you? Selah.
- American Standard Version (ASV)
- Wilt thou show wonders to the dead? Shall they that are deceased arise and praise thee? [Selah
- Bible in Basic English (BBE)
- Will you do works of wonder for the dead? will the shades come back to give you praise? (Selah.)
- Darby Translation (DBY)
- Wilt thou do wonders to the dead? shall the shades arise and praise thee? Selah.
- Webster's Bible (WBS)
- Wilt thou show wonders to the dead? shall the dead arise [and] praise thee? Selah.
- Young's Literal Translation (YLT)
- To the dead dost Thou do wonders? Do Rephaim rise? do they thank Thee? Selah.
Read in context
- 8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- 9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- 10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
- 11ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
- 12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
Cross references
- Psalm 6:5 ಕೀರ್ತನೆಗಳು 6:5ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Isaiah 38:18–19 ಯೆಶಾಯ 38:18–19ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- 1 Corinthians 15:52–57 1 ಕೊರಿಂಥದವರಿಗೆ 15:52–57ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Mark 5:35–36 ಮಾರ್ಕನು 5:35–36ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
- Psalm 118:17 ಕೀರ್ತನೆಗಳು 118:17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- Luke 7:12–16 ಲೂಕನು 7:12–16ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು. ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು. ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು. ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- Job 14:7–12 ಯೋಬನು 14:7–12ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ. ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು. ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು? ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ, ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
- Ezekiel 37:1–14 ಯೆಹೆಜ್ಕೇಲನು 37:1–14ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು. ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು. ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ; ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ. ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ. ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ, ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು. ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು. ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- Psalm 115:17 ಕೀರ್ತನೆಗಳು 115:17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.