Psalms · chapter 89 · verse 10
Psalm 89:10 in Kannada
ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
Kolla lpatta obbanante neenu raahabannu tundaaguvante odediddee. Ninna balada tolininda ninna shatru galannu chadarisi bittiddee.
Psalm 89:10 in English
- King James Version (KJV)
- Thou hast broken Rahab in pieces, as one that is slain; thou hast scattered thine enemies with thy strong arm.
- World English Bible (WEB)
- You have broken Rahab in pieces, like one of the slain. You have scattered your enemies with your mighty arm.
- American Standard Version (ASV)
- Thou hast broken Rahab in pieces, as one that is slain; Thou hast scattered thine enemies with the arm of thy strength.
- Bible in Basic English (BBE)
- Rahab was crushed by you like one wounded to death; with your strong arm you put to flight all your haters.
- Darby Translation (DBY)
- Thou hast crushed Rahab as one that is slain; thou hast scattered thine enemies with the arm of thy strength.
- Webster's Bible (WBS)
- Thou hast broken Rahab in pieces, as one that is slain; thou hast scattered thy enemies with thy strong arm.
- Young's Literal Translation (YLT)
- Thou hast bruised Rahab, as one wounded. With the arm of Thy strength Thou hast scattered Thine enemies.
Read in context
- 8ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- 9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- 10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- 11ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
- 12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
Cross references
- Psalm 144:6 ಕೀರ್ತನೆಗಳು 144:6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- Psalm 87:4 ಕೀರ್ತನೆಗಳು 87:4ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
- Psalm 68:30 ಕೀರ್ತನೆಗಳು 68:30ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Isaiah 24:1 ಯೆಶಾಯ 24:1ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
- Psalm 59:11 ಕೀರ್ತನೆಗಳು 59:11ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
- Exodus 3:19–20 ವಿಮೋಚನಕಾಂಡ 3:19–20ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ. ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Psalm 78:43–72 ಕೀರ್ತನೆಗಳು 78:43–72ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು. ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ. ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು. ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು. ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು, ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ. ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು. ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Psalm 105:27–45 ಕೀರ್ತನೆಗಳು 105:27–45ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು. ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು. ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು. ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು. ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು, ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ. ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Exodus 7:1–15 ವಿಮೋಚನಕಾಂಡ 7:1–15ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು. ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು. ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು. ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು. ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು. ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು. ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ-- ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು. ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು. ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು. ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
- Psalm 68:1 ಕೀರ್ತನೆಗಳು 68:1ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.