Psalms · chapter 89 · verse 22
Psalm 89:22 in Kannada
ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
Shatruvu avanannu balaatkaara maadanu; yaava dushtanoo avanannu hinse padisanu.
Psalm 89:22 in English
- King James Version (KJV)
- The enemy shall not exact upon him; nor the son of wickedness afflict him.
- World English Bible (WEB)
- No enemy will tax him. No wicked man will oppress him.
- American Standard Version (ASV)
- The enemy shall not exact from him, Nor the son of wickedness afflict him.
- Bible in Basic English (BBE)
- The deceit of those who are against him will not overcome him; he will not be troubled by the sons of evil.
- Darby Translation (DBY)
- No enemy shall exact upon him, nor the son of wickedness afflict him;
- Webster's Bible (WBS)
- The enemy shall not exact upon him; nor the son of wickedness afflict him.
- Young's Literal Translation (YLT)
- An enemy exacteth not upon him, And a son of perverseness afflicteth him not.
Read in context
- 20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- 21ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
- 22ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
- 23ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
- 24ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
Cross references
- 2 Samuel 7:10 2 ಸಮುವೇಲನು 7:10ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
- 1 Chronicles 17:9 1 ಪೂರ್ವಕಾಲವೃತ್ತಾಂತ 17:9ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- Matthew 4:1–10 ಮತ್ತಾಯನು 4:1–10ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು. ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು. ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ-- ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು. ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು. ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- 2 Thessalonians 2:3 2 ಥೆಸಲೊನೀಕದವರಿಗೆ 2:3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;