Psalms · chapter 89 · verse 3
Psalm 89:3 in Kannada
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
Naanu aadu kondavanondige odambadike maadiddene; nanna sevakanaada daaveedanige aane ittu helidde nandare--
Psalm 89:3 in English
- King James Version (KJV)
- I have made a covenant with my chosen, I have sworn unto David my servant,
- World English Bible (WEB)
- “I have made a covenant with my chosen one, I have sworn to David, my servant,
- American Standard Version (ASV)
- I have made a covenant with my chosen, I have sworn unto David my servant:
- Bible in Basic English (BBE)
- I have made an agreement with the man of my selection, I have made an oath to David my servant;
- Darby Translation (DBY)
- I have made a covenant with mine elect, I have sworn unto David my servant:
- Webster's Bible (WBS)
- I have made a covenant with my chosen, I have sworn to David my servant,
- Young's Literal Translation (YLT)
- I have made a covenant for My chosen, I have sworn to David My servant:
Read in context
- 1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
- 2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- 3ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
- 4ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- 5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
Cross references
- Psalm 132:11 ಕೀರ್ತನೆಗಳು 132:11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- 2 Samuel 7:10–16 2 ಸಮುವೇಲನು 7:10–16ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Hebrews 7:21 ಇಬ್ರಿಯರಿಗೆ 7:21(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
- 1 Kings 8:16 1 ಅರಸುಗಳು 8:16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
- Acts 2:30 ಅಪೊಸ್ತಲರ ಕೃತ್ಯಗಳು 2:30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
- Psalm 89:28 ಕೀರ್ತನೆಗಳು 89:28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- Psalm 89:34–35 ಕೀರ್ತನೆಗಳು 89:34–35ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- Jeremiah 30:9 ಯೆರೆಮೀಯ 30:9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
- Jeremiah 33:20–21 ಯೆರೆಮೀಯ 33:20–21ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.