Psalms · chapter 89 · verse 32
Psalm 89:32 in Kannada
ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
Koli ninda avara drohavannoo pettugalinda avara akramavannoo dandisuvenu.
Psalm 89:32 in English
- King James Version (KJV)
- Then will I visit their transgression with the rod, and their iniquity with stripes.
- World English Bible (WEB)
- then I will punish their sin with the rod, and their iniquity with stripes.
- American Standard Version (ASV)
- Then will I visit their transgression with the rod, And their iniquity with stripes.
- Bible in Basic English (BBE)
- Then I will send punishment on them for their sin; my rod will be the reward of their evil-doing.
- Darby Translation (DBY)
- Then will I visit their transgression with the rod, and their iniquity with stripes.
- Webster's Bible (WBS)
- Then will I visit their transgression with the rod, and their iniquity with stripes.
- Young's Literal Translation (YLT)
- I have looked after with a rod their transgression, And with strokes their iniquity,
Read in context
- 30ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
- 31ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
- 32ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
- 33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- 34ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
Cross references
- 2 Samuel 7:14 2 ಸಮುವೇಲನು 7:14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
- Hebrews 12:6–11 ಇಬ್ರಿಯರಿಗೆ 12:6–11ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Proverbs 3:11–12 ಜ್ಞಾನೋಕ್ತಿಗಳು 3:11–12ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ; ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- 1 Kings 11:39 1 ಅರಸುಗಳು 11:39ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- 1 Kings 11:14 1 ಅರಸುಗಳು 11:14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
- 1 Kings 11:6 1 ಅರಸುಗಳು 11:6ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- 1 Kings 11:31 1 ಅರಸುಗಳು 11:31ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
- Exodus 32:34 ವಿಮೋಚನಕಾಂಡ 32:34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- Job 9:34 ಯೋಬನು 9:34ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
- 1 Corinthians 11:31–32 1 ಕೊರಿಂಥದವರಿಗೆ 11:31–32ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.