Psalms · chapter 89 · verse 33
Psalm 89:33 in Kannada
ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
Aadaagyoo nanna preeti karuneyannu avaninda sampoornavaagi tolagisenu; illave nanna nambigastikeyannu vyartha maadenu.
Psalm 89:33 in English
- King James Version (KJV)
- Nevertheless my lovingkindness will I not utterly take from him, nor suffer my faithfulness to fail.
- World English Bible (WEB)
- But I will not completely take my loving kindness from him, nor allow my faithfulness to fail.
- American Standard Version (ASV)
- But my lovingkindness will I not utterly take from him, Nor suffer my faithfulness to fail.
- Bible in Basic English (BBE)
- But I will not take away my mercy from him, and will not be false to my faith.
- Darby Translation (DBY)
- Nevertheless my loving-kindness will I not utterly take from him, nor belie my faithfulness;
- Webster's Bible (WBS)
- Nevertheless my loving-kindness will I not utterly take from him, nor suffer my faithfulness to fail.
- Young's Literal Translation (YLT)
- And My kindness I break not from him, Nor do I deal falsely in My faithfulness.
Read in context
- 31ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
- 32ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
- 33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- 34ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- 35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
Cross references
- Isaiah 54:8–10 ಯೆಶಾಯ 54:8–10ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- 2 Samuel 7:15 2 ಸಮುವೇಲನು 7:15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
- Lamentations 3:31–32 ಪ್ರಲಾಪಗಳು 3:31–32ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ; ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Jeremiah 33:20–26 ಯೆರೆಮೀಯ 33:20–26ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 1 Kings 11:32 1 ಅರಸುಗಳು 11:32(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
- 1 Kings 11:13 1 ಅರಸುಗಳು 11:13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 2 Samuel 7:13 2 ಸಮುವೇಲನು 7:13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Psalm 89:39 ಕೀರ್ತನೆಗಳು 89:39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.