Psalms · chapter 89 · verse 38
Psalm 89:38 in Kannada
ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
Aadare neenu asahyisibittu tiraskarisi ninna abhishaktana mele ugranaadi;
Psalm 89:38 in English
- King James Version (KJV)
- But thou hast cast off and abhorred, thou hast been wroth with thine anointed.
- World English Bible (WEB)
- But you have rejected and spurned. You have been angry with your anointed.
- American Standard Version (ASV)
- But thou hast cast off and rejected, Thou hast been wroth with thine anointed.
- Bible in Basic English (BBE)
- But you have put him away in disgust; you have been angry with the king of your selection.
- Darby Translation (DBY)
- But thou hast rejected and cast off; thou hast been very wroth with thine anointed:
- Webster's Bible (WBS)
- But thou hast cast off and abhorred, thou hast been wroth with thy anointed.
- Young's Literal Translation (YLT)
- And Thou, Thou hast cast off, and dost reject, Thou hast shown Thyself wroth With Thine anointed,
Read in context
- 36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- 37ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- 38ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
- 39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- 40ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
Cross references
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Deuteronomy 32:19 ಧರ್ಮೋಪದೇಶಕಾಂಡ 32:19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- Psalm 106:40 ಕೀರ್ತನೆಗಳು 106:40ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
- Psalm 89:51 ಕೀರ್ತನೆಗಳು 89:51ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- 2 Chronicles 12:1–12 2 ಪೂರ್ವಕಾಲವೃತ್ತಾಂತ 12:1–12ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು. ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು. ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು. ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು. ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು. ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು. ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ. ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು. ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು. ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು. ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು. ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
- Hosea 9:17 ಹೋಶೇಯ 9:17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Lamentations 4:20 ಪ್ರಲಾಪಗಳು 4:20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Psalm 77:7 ಕೀರ್ತನೆಗಳು 77:7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
- 2 Samuel 1:21 2 ಸಮುವೇಲನು 1:21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- Psalm 44:9–26 ಕೀರ್ತನೆಗಳು 44:9–26ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ. ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ. ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ. ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ. ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ. ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ. ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ. ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ. ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ. ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ. ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ. ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ. ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ. ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು. ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- 2 Samuel 15:26 2 ಸಮುವೇಲನು 15:26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.