Psalms · chapter 89 · verse 4
Psalm 89:4 in Kannada
ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
Endendigoo ninna santatiyannu sthira padisuvenu; talatalaantarakkoo ninna sinhaasanavannu kattuvenu selaa.
Psalm 89:4 in English
- King James Version (KJV)
- Thy seed will I establish for ever, and build up thy throne to all generations. Selah.
- World English Bible (WEB)
- ‘I will establish your offspring forever, and build up your throne to all generations.’” Selah.
- American Standard Version (ASV)
- Thy seed will I establish for ever, And build up thy throne to all generations. [Selah
- Bible in Basic English (BBE)
- I will make your seed go on for ever, your kingdom will be strong through all generations. (Selah.)
- Darby Translation (DBY)
- Thy seed will I establish for ever, and build up thy throne from generation to generation. Selah.
- Webster's Bible (WBS)
- Thy seed will I establish for ever, and build up thy throne to all generations. Selah.
- Young's Literal Translation (YLT)
- 'Even to the age do I establish thy seed, And have built to generation and generation thy throne. Selah.
Read in context
- 2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- 3ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
- 4ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- 5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
- 6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
Cross references
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- 2 Samuel 7:12–16 2 ಸಮುವೇಲನು 7:12–16ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 132:12 ಕೀರ್ತನೆಗಳು 132:12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- 1 Chronicles 17:10–14 1 ಪೂರ್ವಕಾಲವೃತ್ತಾಂತ 17:10–14ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ. ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು; ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.
- Romans 1:3–4 ರೋಮಾಪುರದವರಿಗೆ 1:3–4ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ; ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- 1 Kings 9:5 1 ಅರಸುಗಳು 9:5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- 1 Chronicles 22:10 1 ಪೂರ್ವಕಾಲವೃತ್ತಾಂತ 22:10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- Acts 13:32–37 ಅಪೊಸ್ತಲರ ಕೃತ್ಯಗಳು 13:32–37ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- Psalm 89:1 ಕೀರ್ತನೆಗಳು 89:1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.