Psalms · chapter 89 · verse 40
Psalm 89:40 in Kannada
ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
Avana beligala nnellaa muridu avana kotegalannu haalu maadiddee.
Psalm 89:40 in English
- King James Version (KJV)
- Thou hast broken down all his hedges; thou hast brought his strong holds to ruin.
- World English Bible (WEB)
- You have broken down all his hedges. You have brought his strongholds to ruin.
- American Standard Version (ASV)
- Thou hast broken down all his hedges; Thou hast brought his strongholds to ruin.
- Bible in Basic English (BBE)
- All his walls are broken down; you have given his strong towers to destruction.
- Darby Translation (DBY)
- Thou hast broken down all his hedges; thou hast brought his strongholds to ruin.
- Webster's Bible (WBS)
- Thou hast broken down all his hedges; thou hast brought his strong holds to ruin.
- Young's Literal Translation (YLT)
- Thou hast broken down all his hedges, Thou hast made his fenced places a ruin.
Read in context
- 38ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
- 39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- 40ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
- 41ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
- 42ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
Cross references
- Psalm 80:12 ಕೀರ್ತನೆಗಳು 80:12ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
- Lamentations 2:5 ಪ್ರಲಾಪಗಳು 2:5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
- Lamentations 2:2 ಪ್ರಲಾಪಗಳು 2:2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
- Isaiah 5:5–6 ಯೆಶಾಯ 5:5–6ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Job 1:10 ಯೋಬನು 1:10ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
- 2 Chronicles 15:5 2 ಪೂರ್ವಕಾಲವೃತ್ತಾಂತ 15:5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- 2 Chronicles 12:2–5 2 ಪೂರ್ವಕಾಲವೃತ್ತಾಂತ 12:2–5ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು. ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು. ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು. ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
- Revelation 13:1–7 ಪ್ರಕಟನೆ 13:1–7ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು. ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು. ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.