Psalms · chapter 89 · verse 43
Psalm 89:43 in Kannada
ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
Avana kattiya baayannu hindirugisi, yuddha dalli avanannu nilluvante maadalilla.
Psalm 89:43 in English
- King James Version (KJV)
- Thou hast also turned the edge of his sword, and hast not made him to stand in the battle.
- World English Bible (WEB)
- Yes, you turn back the edge of his sword, and haven’t supported him in battle.
- American Standard Version (ASV)
- Yea, thou turnest back the edge of his sword, And hast not made him to stand in the battle.
- Bible in Basic English (BBE)
- His sword is turned back; you have not been his support in the fight.
- Darby Translation (DBY)
- Yea, thou hast turned back the edge of his sword, and hast not made him stand in the battle.
- Webster's Bible (WBS)
- Thou hast also turned the edge of his sword, and hast not made him to stand in the battle.
- Young's Literal Translation (YLT)
- Also — Thou turnest back the sharpness of his sword, And hast not established him in battle,
Read in context
- 41ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
- 42ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
- 43ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
- 44ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
- 45ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
Cross references
- 2 Chronicles 25:8 2 ಪೂರ್ವಕಾಲವೃತ್ತಾಂತ 25:8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
- Joshua 7:8–12 ಯೆಹೋಶುವ 7:8–12ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು. ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು? ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- Numbers 14:45 ಅರಣ್ಯಕಾಂಡ 14:45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Numbers 14:42 ಅರಣ್ಯಕಾಂಡ 14:42ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
- Joshua 7:4–5 ಯೆಹೋಶುವ 7:4–5ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು. ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- Ezekiel 30:21–25 ಯೆಹೆಜ್ಕೇಲನು 30:21–25ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ. ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ. ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Psalm 44:10 ಕೀರ್ತನೆಗಳು 44:10ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.