Psalms · chapter 89 · verse 44
Psalm 89:44 in Kannada
ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
Avana prabheyannu tadedi; avana sinhaasanavannu nelakke haakiddee.
Psalm 89:44 in English
- King James Version (KJV)
- Thou hast made his glory to cease, and cast his throne down to the ground.
- World English Bible (WEB)
- You have ended his splendor, and thrown his throne down to the ground.
- American Standard Version (ASV)
- Thou hast made his brightness to cease, And cast his throne down to the ground.
- Bible in Basic English (BBE)
- You have put an end to his glory: the seat of his kingdom has been levelled to the earth.
- Darby Translation (DBY)
- Thou hast made his brightness to cease, and cast his throne down to the ground;
- Webster's Bible (WBS)
- Thou hast made his glory to cease, and cast his throne down to the ground.
- Young's Literal Translation (YLT)
- Hast caused [him] to cease from his brightness, And his throne to the earth hast cast down.
Read in context
- 42ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
- 43ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
- 44ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
- 45ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
- 46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
Cross references
- Daniel 7:20–25 ದಾನಿಯೇಲನು 7:20–25ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು. ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು; ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು. ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- 1 Kings 12:16–20 1 ಅರಸುಗಳು 12:16–20ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು. ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು. ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 1 Kings 14:25–28 1 ಅರಸುಗಳು 14:25–28ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು. ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು. ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು. ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- Psalm 89:39 ಕೀರ್ತನೆಗಳು 89:39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- 1 Samuel 4:21–22 1 ಸಮುವೇಲನು 4:21–22ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು. ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
- Lamentations 4:1–2 ಪ್ರಲಾಪಗಳು 4:1–2ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ. ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
- 2 Thessalonians 2:3–10 2 ಥೆಸಲೊನೀಕದವರಿಗೆ 2:3–10ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.