Psalms · chapter 89 · verse 7
Psalm 89:7 in Kannada
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
Devaru parishuddhara sabheyalli bahala bheekaranoo tanna suttaliruvavarellarige bhayam karanoo aagiddaane.
Psalm 89:7 in English
- King James Version (KJV)
- God is greatly to be feared in the assembly of the saints, and to be had in reverence of all [them that are] about him.
- World English Bible (WEB)
- a very awesome God in the council of the holy ones, to be feared above all those who are around him?
- American Standard Version (ASV)
- A God very terrible in the council of the holy ones, And to be feared above all them that are round about him?
- Bible in Basic English (BBE)
- God is greatly to be feared among the saints, and to be honoured over all those who are about him.
- Darby Translation (DBY)
- God is greatly to be feared in the council of the saints, and terrible for all that are round about him.
- Webster's Bible (WBS)
- God is greatly to be feared in the assembly of the saints, and to be had in reverence by all [them that are] about him.
- Young's Literal Translation (YLT)
- God is very terrible, In the secret counsel of His holy ones, And fearful over all surrounding Him.
Read in context
- 5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
- 6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- 7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- 8ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- 9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
Cross references
- Psalm 47:2 ಕೀರ್ತನೆಗಳು 47:2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
- Psalm 76:7–11 ಕೀರ್ತನೆಗಳು 76:7–11ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು? ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ. ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ. ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ. ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Hebrews 12:28–29 ಇಬ್ರಿಯರಿಗೆ 12:28–29ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Jeremiah 10:7 ಯೆರೆಮೀಯ 10:7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Luke 12:4–5 ಲೂಕನು 12:4–5ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Acts 5:11 ಅಪೊಸ್ತಲರ ಕೃತ್ಯಗಳು 5:11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
- Isaiah 6:2–7 ಯೆಶಾಯ 6:2–7ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು. ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Isaiah 66:2 ಯೆಶಾಯ 66:2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.