Psalms · chapter 89 · verse 9
Psalm 89:9 in Kannada
ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
Neenu samudrada ubbaravannu aaluttee; adara teregalu eluvaaga avugalannu summanirisuttee.
Psalm 89:9 in English
- King James Version (KJV)
- Thou rulest the raging of the sea: when the waves thereof arise, thou stillest them.
- World English Bible (WEB)
- You rule the pride of the sea. When its waves rise up, you calm them.
- American Standard Version (ASV)
- Thou rulest the pride of the sea: When the waves thereof arise, thou stillest them.
- Bible in Basic English (BBE)
- You have rule over the sea in storm; when its waves are troubled, you make them calm.
- Darby Translation (DBY)
- Thou rulest the pride of the sea: when its waves arise, thou stillest them.
- Webster's Bible (WBS)
- Thou rulest the raging of the sea: when its waves arise, thou stillest them.
- Young's Literal Translation (YLT)
- Thou [art] ruler over the pride of the sea, In the lifting up of its billows Thou dost restrain them.
Read in context
- 7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- 8ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- 9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- 10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- 11ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
Cross references
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Psalm 107:25–29 ಕೀರ್ತನೆಗಳು 107:25–29ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- Mark 4:41 ಮಾರ್ಕನು 4:41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Mark 4:39 ಮಾರ್ಕನು 4:39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Matthew 8:24–27 ಮತ್ತಾಯನು 8:24–27ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Psalm 29:10 ಕೀರ್ತನೆಗಳು 29:10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Job 38:8–11 ಯೋಬನು 38:8–11ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Nahum 1:4 ನಹೂಮ 1:4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- Matthew 14:32 ಮತ್ತಾಯನು 14:32ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
- Psalm 66:5–6 ಕೀರ್ತನೆಗಳು 66:5–6ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ. ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.