Psalms · chapter 9 · verse 10
Psalm 9:10 in Kannada
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
Ninna hesarannu tilidavaru ninnalli bharavase idu varu; o kartane, ninnannu hudukuvavarannu neenu toredubidalilla.
Psalm 9:10 in English
- King James Version (KJV)
- And they that know thy name will put their trust in thee: for thou, LORD, hast not forsaken them that seek thee.
- World English Bible (WEB)
- Those who know your name will put their trust in you, for you, LORD, have not forsaken those who seek you.
- American Standard Version (ASV)
- And they that know thy name will put their trust in thee; For thou, Jehovah, hast not forsaken them that seek thee.
- Bible in Basic English (BBE)
- And those who have knowledge of your name will put their faith in you; because you, Lord, have ever given your help to those who were waiting for you.
- Darby Translation (DBY)
- And they that know thy name will confide in thee; for thou, Jehovah, hast not forsaken them that seek thee.
- Webster's Bible (WBS)
- And they that know thy name will put their trust in thee: for thou, LORD, hast not forsaken them that seek thee.
- Young's Literal Translation (YLT)
- They trust in Thee who do know Thy name, For Thou hast not forsaken Those seeking Thee, O Jehovah.
Read in context
- 8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- 9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- 10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- 11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- 12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
Cross references
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 105:3–4 ಕೀರ್ತನೆಗಳು 105:3–4ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
- 2 Corinthians 1:9–10 2 ಕೊರಿಂಥದವರಿಗೆ 1:9–10ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Psalm 5:11 ಕೀರ್ತನೆಗಳು 5:11ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- Jeremiah 29:13 ಯೆರೆಮೀಯ 29:13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.