Psalms · chapter 9 · verse 12
Psalm 9:12 in Kannada
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
Aatanu raktaaparaadhavannu vichaarisuvaaga avarannu jnyaapakamaadikolluvanu; aatanu deenara koogannu maretubidanu.
Psalm 9:12 in English
- King James Version (KJV)
- When he maketh inquisition for blood, he remembereth them: he forgetteth not the cry of the humble.
- World English Bible (WEB)
- For he who avenges blood remembers them. He doesn’t forget the cry of the afflicted.
- American Standard Version (ASV)
- For he that maketh inquisition for blood remembereth them; He forgetteth not the cry of the poor.
- Bible in Basic English (BBE)
- When he makes search for blood, he has them in his memory: he is not without thought for the cry of the poor.
- Darby Translation (DBY)
- For when he maketh inquisition for blood, he remembereth them; the cry of the afflicted ones hath he not forgotten.
- Webster's Bible (WBS)
- When he maketh inquisition for blood, he remembereth them: he forgetteth not the cry of the humble.
- Young's Literal Translation (YLT)
- For He who is seeking for blood Them hath remembered, He hath not forgotten the cry of the afflicted.
Read in context
- 10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- 11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- 12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- 13ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
- 14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
Cross references
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Genesis 9:5 ಆದಿಕಾಂಡ 9:5ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
- Revelation 6:9–10 ಪ್ರಕಟನೆ 6:9–10ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Psalm 22:24 ಕೀರ್ತನೆಗಳು 22:24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- Luke 18:7–8 ಲೂಕನು 18:7–8ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Exodus 3:9 ವಿಮೋಚನಕಾಂಡ 3:9ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- Psalm 102:17 ಕೀರ್ತನೆಗಳು 102:17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
- Judges 10:16 ನ್ಯಾಯಸ್ಥಾಪಕರು 10:16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.