Psalms · chapter 90 · verse 12
Psalm 90:12 in Kannada
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
Naavu jnyaanavulla hrudayavannu honduva haage, namma divasagalannu lekkisuvadakke namage kalisu.
Psalm 90:12 in English
- King James Version (KJV)
- So teach [us] to number our days, that we may apply [our] hearts unto wisdom.
- World English Bible (WEB)
- So teach us to count our days, that we may gain a heart of wisdom.
- American Standard Version (ASV)
- So teach us to number our days, That we may get us a heart of wisdom.
- Bible in Basic English (BBE)
- So give us knowledge of the number of our days, that we may get a heart of wisdom.
- Darby Translation (DBY)
- So teach [us] to number our days, that we may acquire a wise heart.
- Webster's Bible (WBS)
- So teach [us] to number [our] days, that we may apply our hearts to wisdom.
- Young's Literal Translation (YLT)
- To number our days aright let [us] know, And we bring the heart to wisdom.
Read in context
- 10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- 11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- 12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
- 13ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
- 14ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.
Cross references
- Ephesians 5:16–17 ಎಫೆಸದವರಿಗೆ 5:16–17ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ. ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- Psalm 39:4 ಕೀರ್ತನೆಗಳು 39:4ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Proverbs 4:7 ಜ್ಞಾನೋಕ್ತಿಗಳು 4:7ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
- Proverbs 3:13–18 ಜ್ಞಾನೋಕ್ತಿಗಳು 3:13–18ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ. ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ. ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ. ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Proverbs 23:12 ಜ್ಞಾನೋಕ್ತಿಗಳು 23:12ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
- Luke 12:35–40 ಲೂಕನು 12:35–40ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ. ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ. ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು. ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು. ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ. ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Proverbs 4:5 ಜ್ಞಾನೋಕ್ತಿಗಳು 4:5ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
- Proverbs 7:1–4 ಜ್ಞಾನೋಕ್ತಿಗಳು 7:1–4ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ. ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು. ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ. ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;