Psalms · chapter 90 · verse 5
Psalm 90:5 in Kannada
ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
Avarannu pravaahadante badu kondu hoguttee; avaru nidreyalliddanteyoo beligge chiguruva hullina haageyoo iddaare.
Psalm 90:5 in English
- King James Version (KJV)
- Thou carriest them away as with a flood; they are [as] a sleep: in the morning [they are] like grass [which] groweth up.
- World English Bible (WEB)
- You sweep them away as they sleep. In the morning they sprout like new grass.
- American Standard Version (ASV)
- Thou carriest them away as with a flood; they are as a sleep: In the morning they are like grass which groweth up.
- Bible in Basic English (BBE)
- ...
- Darby Translation (DBY)
- Thou carriest them away as with a flood; they are [as] a sleep: in the morning they are like grass [that] groweth up:
- Webster's Bible (WBS)
- Thou carriest them away as with a flood; they are [as] a sleep; in the morning [they are] like grass [which] groweth.
- Young's Literal Translation (YLT)
- Thou hast inundated them, they are asleep, In the morning as grass he changeth.
Read in context
- 3ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
- 4ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
- 5ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
- 6ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
- 7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
Cross references
- Isaiah 40:6 ಯೆಶಾಯ 40:6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 103:15–16 ಕೀರ್ತನೆಗಳು 103:15–16ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Psalm 73:20 ಕೀರ್ತನೆಗಳು 73:20ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Job 27:20–21 ಯೋಬನು 27:20–21ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ. ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
- Job 20:8 ಯೋಬನು 20:8ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Isaiah 29:7–8 ಯೆಶಾಯ 29:7–8ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು. ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
- Job 9:26 ಯೋಬನು 9:26ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- Jeremiah 46:7–8 ಯೆರೆಮೀಯ 46:7–8ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.