Psalms · chapter 91 · verse 3
Psalm 91:3 in Kannada
ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
Nishchayavaagi aatanu ninnannu bedana urli nindaloo apaayada jaadyadindaloo bidisu vanu.
Psalm 91:3 in English
- King James Version (KJV)
- Surely he shall deliver thee from the snare of the fowler, [and] from the noisome pestilence.
- World English Bible (WEB)
- For he will deliver you from the snare of the fowler, and from the deadly pestilence.
- American Standard Version (ASV)
- For he will deliver thee from the snare of the fowler, And from the deadly pestilence.
- Bible in Basic English (BBE)
- He will take you out of the bird-net, and keep you safe from wasting disease.
- Darby Translation (DBY)
- Surely he shall deliver thee from the snare of the fowler, [and] from the destructive pestilence.
- Webster's Bible (WBS)
- Surely he shall deliver thee from the snare of the fowler, [and] from the noisome pestilence.
- Young's Literal Translation (YLT)
- For He delivereth thee from the snare of a fowler, From a calamitous pestilence.
Read in context
- 1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- 2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- 3ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
- 4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- 5ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ
Cross references
- Psalm 124:7 ಕೀರ್ತನೆಗಳು 124:7ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Psalm 141:9 ಕೀರ್ತನೆಗಳು 141:9ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
- Job 5:10–22 ಯೋಬನು 5:10–22ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ; ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ. ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ. ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು. ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ. ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ. ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
- Proverbs 7:23 ಜ್ಞಾನೋಕ್ತಿಗಳು 7:23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Proverbs 6:5 ಜ್ಞಾನೋಕ್ತಿಗಳು 6:5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- 2 Timothy 2:26 2 ತಿಮೊಥೆಯನಿಗೆ 2:26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Psalm 91:6 ಕೀರ್ತನೆಗಳು 91:6ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
- 1 Timothy 6:9 1 ತಿಮೊಥೆಯನಿಗೆ 6:9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- 2 Samuel 24:15 2 ಸಮುವೇಲನು 24:15ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
- Numbers 16:46–48 ಅರಣ್ಯಕಾಂಡ 16:46–48ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- Hosea 9:8 ಹೋಶೇಯ 9:8ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.