Psalms · chapter 93 · verse 1
Psalm 93:1 in Kannada
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
Kartanu aaluttaane, aatanu ghanateyannu hoddukondiddaane; kartanu bala dinda hoddukondiddaane, adarinda tanna nadu vannu kattikondiddaane; lokavu saha sthiravaagide; kadaluvadilla.
Psalm 93:1 in English
- King James Version (KJV)
- The LORD reigneth, he is clothed with majesty; the LORD is clothed with strength, [wherewith] he hath girded himself: the world also is stablished, that it cannot be moved.
- World English Bible (WEB)
- The LORD reigns! He is clothed with majesty! The LORD is armed with strength. The world also is established. It can’t be moved.
- American Standard Version (ASV)
- Jehovah reigneth; he is clothed with majesty; Jehovah is clothed with strength; he hath girded himself therewith: The world also is established, that it cannot be moved.
- Bible in Basic English (BBE)
- The Lord is King; he is clothed with glory; the Lord is clothed with strength; power is the cord of his robe; the world is fixed, so that it may not be moved.
- Darby Translation (DBY)
- Jehovah reigneth, he hath clothed himself with majesty: Jehovah hath clothed himself, he hath girded himself with strength; yea, the world is established, it shall not be moved.
- Webster's Bible (WBS)
- The LORD reigneth, he is clothed with majesty; the LORD is clothed with strength, [with which] he hath girded himself: the world also is established, that it cannot be moved.
- Young's Literal Translation (YLT)
- Jehovah hath reigned, Excellency He hath put on, Jehovah put on strength, He girded Himself, Also — established is the world, unmoved.
Read in context
- 1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- 2ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
- 3ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
Cross references
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- 1 Chronicles 29:12 1 ಪೂರ್ವಕಾಲವೃತ್ತಾಂತ 29:12ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Psalm 103:19 ಕೀರ್ತನೆಗಳು 103:19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
- Psalm 65:6 ಕೀರ್ತನೆಗಳು 65:6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
- Psalm 97:1 ಕೀರ್ತನೆಗಳು 97:1ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
- Isaiah 45:18 ಯೆಶಾಯ 45:18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- Psalm 104:1–2 ಕೀರ್ತನೆಗಳು 104:1–2ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ. ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Isaiah 45:12 ಯೆಶಾಯ 45:12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- Daniel 4:32–34 ದಾನಿಯೇಲನು 4:32–34ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು. ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು. ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- Psalm 59:13 ಕೀರ್ತನೆಗಳು 59:13ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.